ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ ಹಿನ್ನೆಲೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com. ಬಂಟ್ವಾಳ,ಜು.10: ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು.


ಈ ಸಂದರ್ಭ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದು ಎಲ್ಲರ ಮೆಚ್ಚುಗೆ ಗಳಿಸಿಕೊಂಡಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿಯಾಗಿ
ನೀನೇ ನಮಗೆ ಸ್ಪೂರ್ತಿ ಎಂದು ಆತನ ಪಠ್ಯೇತರ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಪರೀಕ್ಷೆ ಹೇಗಿತ್ತು ಎಂಬ ಮಾಹಿತಿ ಕೇಳಿದರು. ನಿನ್ನ ಸಾಧನೆಯ ಕುರಿತು ಅದೇ ದಿನ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದೆ ಎಂದು . ತಮ್ಮ ಆಪ್ತ ಸಹಾಯಕನನ್ನು ಕರೆದು ಪೋಟೊ ತೆಗೆಸಿಕೊಂಡರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮೊದಲಾದವರು ಜತೆಗಿದ್ದರು.

Also Read  ಕಡಬ: ಸಮುದಾಯ ಆರೋಗ್ಯ ಕೇಂದ್ರಕ್ಕೆ 14.5 ರೂ. ಲಕ್ಷದ ನೂತನ ಆಂಬ್ಯುಲೆನ್ಸ್ ಕೊಡುಗೆ

error: Content is protected !!
Scroll to Top