ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು



(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ -19 ಸೋಂಕಿನಿಂದ ಎಂಟು ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ ಇಷ್ಟು ಸಂಖ್ಯೆಯಲ್ಲಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಇದೇ ಮೊದಲು. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.





ಲಿವರ್‌ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 68 ವರ್ಷದ ವ್ಯಕ್ತಿ ಜು. 8ರಂದು, ಅಧಿಕ ತೂಕ, ಒಬೆಸಿಟಿಯಿಂದ ಬಳಲುತ್ತಿದ್ದ ಹೊಸಬೆಟ್ಟುವಿನ 35 ವರ್ಷದ ವ್ಯಕ್ತಿ, ಮೂತ್ರಕೋಶದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ 67 ವರ್ಷದ ವ್ಯಕ್ತಿ, ಮಧುಮೇಹದಿಂದ ಬಳಲುತ್ತಿದ್ದ 57 ವರ್ಷದ ವ್ಯಕ್ತಿ, ನಂಜು, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿ ಜು. 9 ರಂದು ಮೃತಪಟ್ಟಿದ್ದಾರೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ 65 ವರ್ಷದ ವ್ಯಕ್ತಿ, ಮಧುಮೇಹದಿಂದ ಬಳಲುತ್ತಿದ್ದ 48 ವರ್ಷದ ವ್ಯಕ್ತಿ, ಮಧುಮೇಹದಿಂದ ಬಳಲುತ್ತಿದ್ದ 58 ವರ್ಷದ ಮಹಿಳೆ ಶುಕ್ರವಾರ ಮೃತಪಟ್ಟವರು. ಆದರೆ, ಸಾವಿನ ನಿಖರ ಕಾರಣ ನಿರ್ಧರಿಸಲು ತಜ್ಞರ ಸಮಿತಿಯಿಂದ ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.






 

 

error: Content is protected !!
Scroll to Top