ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.11. ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ.


ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ.


ಸರ್ಕಾರಿ ಕಚೇರಿಗಳು, ಕೆಎಸ್‌ಆರ್‌ಟಿಸಿ ಬಸ್‍ಗಳು, ಬಾರ್, ಸೆಲೂನ್, ಮದ್ಯದಂಗಡಿ ಸಂಪೂರ್ಣ ಬಂದ್ ಆಗಲಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್ ಓಪನ್, ಅಂಬುಲೆನ್ಸ್ ಓಡಾಟ, ಮಾಧ್ಯಮ ಪ್ರತಿನಿಧಿಗಳಿಗೆ ಅವಕಾಶ, ಅನಾರೋಗ್ಯ ಸಮಸ್ಯೆವುಳ್ಳರಿಗೆ ಆಸ್ಪತ್ರೆಗೆ ಹೋಗಲು ಸಂಪೂರ್ಣ ಅವಕಾಶವಿದೆ.

Scroll to Top