ನೇತ್ರಾವತಿ ಸೇತುವೆಯಿಂದ ಹಾರಿದ ಮಹಿಳೆ ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 11, ತಾಲೂಕಿನ ಸಜಿಪಮೂಡ ಗ್ರಾಮದ ಮಹಿಳೆಯೋರ್ವರು ಪಾಣೆಮಂಗಳೂರಿನ ನೂತನ ಸೇತುವೆ ಬಳಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿರುವ ಸಂಶಯ ವ್ಯಕ್ತವಾದ ಹಿನ್ನೆಲೆ ಶನಿವಾರ ಬೆಳಗ್ಗಿನಿಂದ ಮುಳುಗು ತಜ್ಞರು ಮಹಿಳೆಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಮೂಡ ಗ್ರಾಮದ ನಿವಾಸಿಯಾಗಿದ್ದ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಇವರು ಬಿ. ಸಿರೋಡಿನ ಚಿಕ್ಕಯ್ಯಮಠ ಎಂಬಲ್ಲಿ ತನ್ನ ಸಹೋದರಿಯ ಮನೆಗೆ ಕಳೆದ ಕೆಲ ದಿನಗಳ ಹಿಂದೆ ಬಂದಿದ್ದರು. ನಿನ್ನೆ ರಾತ್ರಿ ಎಂದಿನಂತೆ ಊಟ ಮಾಡಿ ಮಲಗಿದ್ದ ಮಹಿಳೆ ಇಂದು ಮುಂಜಾನೆ 5 ರ ವೇಳೆಗೆ ಕಾಣೆಯಾಗಿದ್ದರು. ಈ ವೇಳೆ ಮನೆಯವರು ಹುಡುಕಾಟ ನಡೆಸಿದಾಗ ಪಾಣೆಮಂಗಳೂರು ನೂತನ ಸೇತುವೆ ಬಳಿ ಆಕೆ ಧರಿಸಿದ್ದ ಶಾಲು ಹಾಗೂ ಕೈಯಲ್ಲಿದ್ದ ಬಳೆ ಪತ್ತೆಯಾಗಿದ್ದು, ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.

Also Read  ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ

ಆ ಮಹಿಳೆ ಈ ಹಿಂದೆಯೂ ಒಮ್ಮೆ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು ಎಂದು ಹೇಳಲಾಗಿದ್ದು ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

error: Content is protected !!
Scroll to Top