ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜದ ಮಹತ್ವ ► ವಿದ್ಯಾರ್ಥಿಗಳೊಂದಿಗೆ ಪರಸ್ಪರ ಸಂವಾದ

(ನ್ಯೂಸ್ ಕಡಬ) newskadaba.com ಕಡಬ,ಸೆ.8, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಸಹಯೋಗದಲ್ಲಿ ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಶ್ರೀ ಭಾರತೀ ಕಾಲೇಜಿನಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಡಾ. ಮುರಳಿ ಮೋಹನ್ ಚೂಂತಾರು ಅವರು ರಾಷ್ಟ್ರಗೀತೆ ಹಾಗೂ ರಾಷ್ಟ್ರಧ್ವಜದ ಮಹತ್ವವನ್ನು ಅರಿತುಕೊಳ್ಳಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಭಾರತ ಸೇವಾ ದಳದ ಕರ್ನಾಟಕ ರಾಜ್ಯದ ಕಾರ್ಯಕಾರಿಣಿ ಸದಸ್ಯರಾದ ಆಲ್ಫೋನ್ಸ್‌ ಫ್ರಾಂಕೊ ಅವರು ಪ್ರಾತ್ಯಕ್ಷಿತೆಯ ಮೂಲಕ ರಾಷ್ಟ್ರಧ್ವಜದ ತ್ರಿವರ್ಣಗಳು ಮತ್ತು ಅಶೋಕಚಕ್ರದ ಮಹತ್ವದ ಕುರಿತು ವಿವರಿಸಿದರು. ಬಳಿಕ ರಾಷ್ಟ್ರಗೀತೆಯ ಮಹತ್ವವನ್ನು ವಿವರಿಸಿ ಹಾಡುವ ವಿಧಾನವನ್ನು ತಿಳಿಸಿಕೊಟ್ಟು, ಪರಸ್ಪರ ಸಂವಾದದ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು.

Also Read  ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಈ ಕಾರ್ಯಕ್ರಮದಲ್ಲಿ ಕನ್ನಡ ಉಪನ್ಯಾಸಕಿ ಗಂಗಾರತ್ನ ಮುಗುಳಿ ಸ್ವಾಗತಿಸಿ, ಕಾಲೇಜಿನ ಪ್ರಾಶುಪಾಲರಾದ ಡಾ.ಈಶ್ವರಪ್ರಸಾದ್ ಇವರು ವಂದಿಸಿದರು.  ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

error: Content is protected !!
Scroll to Top