ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ,ಜು.11:  ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ  ಪ್ರಸಿದ್ಧ ದೇವಾಲಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ  ಕ್ಷೇತ್ರಕ್ಕೆ   ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹಾಗೂ ಅವರ ಪತ್ನಿ ಸಮೇತರಾಗಿ  ಭೇಟಿ ನೀಡಿ, ದೇವರ ದರ್ಶನ ಪಡೆದರು.

ಕೊರೋನಾ ಆರ್ಭಟದ ನಡುವೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆದಿದ್ದಾರೆ.  ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ ಮುಂದೂಡಲಾಗಿತ್ತು. ಬಳಿಕ ಜೂ 25ರಂದು ಪರೀಕ್ಷೆ ನಡೆದಿದ್ದು, ಜುಲೈ 4ರಂದು ಯಾವುದೇ ತೊಂದರೆ ಇಲ್ಲದೇ ಯಶಸ್ವಿಯಾಗಿ ಮುಗಿದ ನಿಟ್ಟಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.  ಮಕ್ಕಳ ಹಿತ ದೃಷ್ಟಿಯಿಂದ ಶಿಕ್ಷಣ ಸಚಿವರು ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ  ಶುಕ್ರವಾರ ಭೇಟಿ ನೀಡಿದರು.

Also Read  ಕಡಬ: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ - ಸವಾರ ಸ್ಥಳದಲ್ಲೇ ಮೃತ್ಯು

 

error: Content is protected !!
Scroll to Top