ಮಂಗಳೂರು: ಮನಪಾ ಆಯುಕ್ತರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಮಂಗಳೂರು: ಜು.12, ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಅವರಿಗೆ ಕೊರೋನ ಸೋಂಕು ತಗುಲಿರುವುದು ರವಿವಾರ ದೃಢಪಟ್ಟಿದೆ.

ಎರಡು ದಿನಗಳ ಹಿಂದೆ ಅವರಲ್ಲಿ ಜ್ವರ ಲಕ್ಷಣ ಕಂಡುಬಂದಿತ್ತು. ಅವರ ಗಂಟಲು ದ್ರವ ಮಾದರಿಯನ್ನು ವೈದ್ಯ ಸಿಬ್ಬಂದಿ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿದ್ದರು. ಇಂದು ಬೆಳಗ್ಗೆ ಬಂದ ವರದಿಯಲ್ಲಿ ಪಾಸಿಟಿವ್ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರು ನಗರದ ಖಾಸಗಿ ಆಸ್ಪತ್ರೆಗೆ ಬೆಳಗ್ಗೆ ದಾಖಲಾಗಿದ್ದಾರೆ. ಆಯುಕ್ತರ ಆರೋಗ್ಯ ಉತ್ತಮ ಸ್ಥಿತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

Also Read  ಡಿ. 28: ಖೇಲೋ ಇಂಡಿಯಾ ರಾಜ್ಯದ ಬಾಲಕಿಯರ ವಾಲಿಬಾಲ್ ತಂಡಕ್ಕೆ ಕ್ರೀಡಾಪಟುಗಳ ಆಯ್ಕೆ

error: Content is protected !!
Scroll to Top