ಕೃಷ್ಣನಗರಿಯಲ್ಲಿ ಕೊರೋನಾ ಆರ್ಭಟ ➤ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ ,ಜು.12: ಕೋವಿಡ್-19 ಸೋಂಕಿನ ಕಾರಣದಿಂದ ಉಡುಪಿಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದಿರಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ನಾಲ್ಕನೇ ಬಲಿಯಾಗಿದೆ.

ದಾವಣಗೆರೆ ಮೂಲದ 70 ವರ್ಷದ ವೃದ್ದರೊಬ್ಬರು ಉಡುಪಿಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಅವರನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದ ಸಂದರ್ಭ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿತ್ತು.ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ ವೃದ್ಧರನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಾಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇದರಿಂದ ಜಿಲ್ಲೆಯ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ. ಜಿಲ್ಲೆಯ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1567ಕ್ಕೆ ಏರಿಕೆಯಾಗಿದೆ.

Also Read  ಕುದ್ಮಾರು: ಡಿ.ಸಿ.ಮನ್ನಾ ಭೂಮಿಯನ್ನು ಅರ್ಹರಿಗೆ ಹಂಚಲು ಪ್ರಸ್ತಾವನೆ ► 15 ದಿನಗಳೊಳಗೆ ಸಾರ್ವಜನಿಕ ಅಭಿಪ್ರಾಯ ಸಲ್ಲಿಸಲು ಅವಕಾಶ

error: Content is protected !!
Scroll to Top