ಕಡಬದಲ್ಲಿ ಮತ್ತೆ ಕೊರೋನಾ‼️ ➤ ಬಲ್ಯದ ನರ್ಸ್ ಗೆ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜು.12. ಕಡಬದಲ್ಲಿ ಮತ್ತೆ ಕೊರೋನಾ ಕಾಣಿಸಿಕೊಂಡಿದ್ದು, ಬಲ್ಯದ ನರ್ಸ್ ಓರ್ವರಿಗೆ ಕೊರೋನಾ ಪಾಸಿಟಿವ್ ಬಂದಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಡಬ ತಾಲೂಕಿನ ಬಲ್ಯ ಸಂಪಡ್ಕದ ನರ್ಸ್ ಓರ್ವರ ಗಂಟಲು ದ್ರವ ಮಾದರಿ ಪರೀಕ್ಷಿಸಿದಾಗ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಿದ್ದಾರೆ.

Scroll to Top