ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಜು.12. ಗರ್ಭಿಣಿ ಮಹಿಳೆಯೋರ್ವರು ಕಡಬದ 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಭಾನುವಾರದಂದು ನಡೆದಿದೆ.

ಕಡಬ ತಾಲೂಕು ಕಳಾರ ಸಮೀಪದ ಅಡ್ಕಾಡಿ ನಿವಾಸಿ ದಿನೇಶ್ ಎಂಬವರ ಪತ್ನಿ ಶ್ರೀಮತಿ ಬಾಲಕಿ(30) ಯವರಿಗೆ ಹೆರಿಗೆ ನೋವು ಬಂದ ಕಾರಣ ಕಡಬದ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ತಕ್ಷಣವೇ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ವೈದ್ಯಾಧಿಕಾರಿ ಸೂಚಿಸಿದ್ದು, ಅದರಂತೆ ಕಡಬದ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಕರೆದೊಯ್ಯುವ ವೇಳೆ ಮಾಣಿ ಸಮೀಪ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 108 ಇಎಂಟಿ ಪ್ರಜ್ಞಾ ಹಾಗೂ ಪೈಲಟ್ ಚಂದ್ರಶೇಖರ್ ಅವರು ಗರ್ಭಿಣಿ ಮಹಿಳೆಗೆ ಯಶಸ್ವೀ ಹೆರಿಗೆ ಮಾಡಿಸಿದ್ದಾರೆ. ತಾಯಿ ಮಗು ಆರೋಗ್ಯವಾಗಿದ್ದು, ಬಂಟ್ವಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ - ಕೇರಳ ಗಡಿ ಓಪನ್

error: Content is protected !!
Scroll to Top