ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮುಂಬೈ,ಜು.12: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್​ ಬಚ್ಚನ್​ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಇಡೀ ಕುಟುಂಬಕ್ಕೆ ಕೊರೋನಾ ವೈರಸ್​ ಹರಡಿರುವ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ಕುಟುಂಬದವರೆಲ್ಲರು ಕೊರೋನಾ ಟೆಸ್ಟ್​ಗೆ ಒಳಗಾಗಿದ್ದರು. ಆದರೀಗ  ನಟಿ ಐಶ್ವರ್ಯಾ ರೈ ಬಚ್ಚನ್​ ಮತ್ತು ಮಗಳು ಆರಾಧ್ಯಾ ರೈ ಅವರಿಗೆ ಕೊರೋನಾ ಪಾಸಿಟಿವ್​ ಬಂದಿದೆ.

“ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿವರ್ಗದವರ ಪರೀಕ್ಷೆ ನಡೆಯುತ್ತಿದೆ. ಅದರ ಫಲಿತಾಂಶ ಬರಬೇಕಿದೆ. ಕಳೆದ 10 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಳ್ಳಿ,” ಎಂದು ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿದ್ದರು. ಈ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಅಭಿಷೇಕ್ ಬಚ್ಚನ್​ ತಮಗೂ ಕೊರೋನಾ ವೈರಸ್​ ಇರುವ ವಿಚಾರವನ್ನು ಒಪ್ಪಿಕೊಂಡಿದ್ದರು. ಉಳಿದವರ ಕೊರೋನಾ ಪರೀಕ್ಷೆಯ ವರದಿ ಬರಬೇಕಿದೆ ಎಂದು ಹೇಳಿದ್ದರು.

Also Read  ಉಡುಪಿ: ಬಾವಿಗೆ ಬಿದ್ದ ಜಿಂಕೆ ರಕ್ಷಿಸಿದ ಅರಣ್ಯ ಅಧಿಕಾರಿಗಗಳು

 

ನಿನ್ನೆ ಮಾಡಿದ ರಾಪಿಡ್ ಟೆಸ್ಟ್ ನಲ್ಲಿ ಎಲ್ಲರಿಗೂ ನೆಗಟಿವ್ ರಿಪೋರ್ಟ್ ಬಂದಿತ್ತು.  ಆದರೆ ಇಂದು ಸ್ವಾಬ್ ಟೆಸ್ಟ್ ರಿಪೋರ್ಟ್ ಬಂದಿದ್ದು, ಐಶ್ವರ್ಯಾ ರೈ ಮತ್ತು ಮಗಳು ಆರಾಧ್ಯಾ ಬಚ್ಚನ್​ಗೆ ಪಾಸಿಟಿವ್  ಬಂದಿದೆ.​ ಉಳಿದಂತೆ ಜಯಾ ಬಚ್ಚನ್, ಪುತ್ರಿ ಶ್ವೇತಾ ನಂದಾ, ಮೊಮ್ಮಕ್ಕಳಾದ ಅಗಸ್ತ್ಯ ಹಾಗೂ ನವ್ಯ ನವೇಲಿ ರಿಪೋರ್ಟ್ ನೆಗಟಿವ್ ಬಂದಿದೆ.

error: Content is protected !!
Scroll to Top