(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಲವು ಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಈ ನಡುವೆ ದ.ಕ. ಜಿಲ್ಲೆಯಿಂದ ಸೋಮವಾರದಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ದ.ಕ. ಜಿಲ್ಲೆಯಲ್ಲಿ ಇನ್ನು ಮುಂದೆ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದಾಗಿ ಸಚಿವರು ತಿಳಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಇರುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಿಗೆ ತೆರಳುವ ಸಂದರ್ಭದಲ್ಲಿ, ವಾಹನಗಳಲ್ಲಿ ಸಂಚರಿಸುವ ಸಂದರ್ಭದಲ್ಲಿ ಕಚೇರಿಗಳಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ. ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಅಲ್ಲದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅನಗತ್ಯ ತಿರುಗಾಡುವುದಕ್ಕೂ ಬ್ರೇಕ್ ಬೀಳಲಿದೆ ಎಂದಿದ್ದಾರೆ.