ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಒಂದು ಕಡೆ ಕೊರೊನಾ ಆರ್ಭಟಿಸುತ್ತಿದ್ದರೆ ಇತ್ತ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿರುವ ರಾಜ್ಯ ಸರಕಾರ ಇಂದಿನಿಂದ ಮೌಲ್ಯಮಾಪನ್ಕೆ ಸಿದ್ದತೆ ಮಾಡಿಕೊಂಡಿದೆ. ಮಂಗಳೂರಿನ 8 ಕೇಂದ್ರದಲ್ಲಿ1300 ಶಿಕ್ಷಕರು ಮೌಲ್ಯಮಾಪನ ನಡೆಸಲಿದ್ದಾರೆ.


ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತು ಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಮೌಲ್ಯಮಾಪನ ಆರಂಭವಾಗಲಿದೆ. ಕೊರೊನಾ ಭಯದಿಂದ ತಾಲೂಕು ಕೇಂದ್ರದಲ್ಲೇ ಮೌಲ್ಯಮಾಪನಕ್ಕೆ ಅವಕಾಶ ನೀಡಬೇಕು ಎನ್ನುವ ದ.ಕ ಜಿಲ್ಲೆಯ ಶಿಕ್ಷಕರ ಮನವಿಯನ್ನು ಸರಕಾರ ನಿರಾಕರಿಸಿದೆ. ಹೀಗಾಗಿ ಪ್ರತಿ ತಾಲೂಕಿನಿಂದ ಮೌಲ್ಯಮಾಪನಕ್ಕೆ ಆಗಮಿಸುವ ಶಿಕ್ಷಕರ ಪಟ್ಟಿಯನ್ನು ಶಿಕ್ಷಣ ಇಲಾಖೆ ಸಿದ್ದಪಡಿಸಿ, ಮೌಲ್ಯಮಾಪನಕರನ್ನು ಕರೆತರುವ ಜವಾಬ್ದಾರಿಯನ್ನು ತಾಲೂಕು ಶಿಕ್ಷಣಾಧಿಕಾರಿಗೆ ನೀಡಲಾಗಿದೆ. ಹೀಗಾಗಿ ಶಿಕ್ಷಕರಿಗಾಗಿಯೇ ಪ್ರತಿ ತಾಲೂಕಿನಿಂದ ಬಸ್ ವ್ಯವಸ್ಥೆ ಮಾಡಲಾಗಿದೆ.

Also Read  ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ - ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹಲವು ಉದ್ಯೋಗಗಳು

ಮೌಲ್ಯಮಾಪನವನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಜು.13 ರಿಂದ ಜು.20 ರವರೆಗೆ ದ.ಕ ಜಿಲ್ಲೆಯ ಮೌಲ್ಯಮಾಪನ ಕೇಂದ್ರಗಳ 200 ಮೀ. ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇದಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ರಾಜ್ಯದ 228 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.

error: Content is protected !!
Scroll to Top