ದ.ಕ.ಲಾಕ್‌ಡೌನ್ ಸಿಎಂ ಜತೆ ಚರ್ಚಿಸಿ ತೀರ್ಮಾನ ➤ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಜಾರಿ ಬಗ್ಗೆ ಅಂತಿಮ ನಿರ್ಧಾರ ಆಗಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಜತೆ, ತಾನು, ಸಂಸದರು, ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದು, ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

 


ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನಕ್ಕೆ ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಲಾಕ್‌ಡೌನ್ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಅಲ್ಲಲ್ಲಿ ಸಾರ್ವಜನಿಕರು ಸ್ವಯಂಪ್ರೇರಿತವಾಗಿ ಲಾಕ್‌ಡೌನ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಜನರಿಗೆ ತೊಂದರೆ ಆಗುವ ನಿರ್ಧಾರವನ್ನು ಹಠಾತ್ ಜಾರಿಗೆ ತರುವುದಿಲ್ಲ. ಜನರು ಗೊಂದಲಕ್ಕೀಡಾಗಬಾರದು ಎಂದೂ ತಿಳಿಸಿದ್ದಾರೆ.

Also Read  ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ

 

error: Content is protected !!
Scroll to Top