(ನ್ಯೂಸ್ ಕಡಬ)newskadaba.com ಮಂಗಳೂರು: ಜು.13, ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಗುಣಮುಖರಾಗಿದ್ದಾರೆ.
ಜುಲೈ 2 ರಂದು ಶಾಸಕ ಭರತ್ ಶೆಟ್ಟಿ ಅವರಿಗೆ ಕೊರೋನಾ ದೃಢಪಟ್ಟಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಗಂಟಲುದ್ರವ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು ಅವರು ಗುಣಮುಖರಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಅವರು ಪ್ರಕಟಿಸಿದ್ದಾರೆ.