ಜು.16 ರಿಂದ ಒಂದು ವಾರ ದ.ಕ ಜಿಲ್ಲೆ ಲಾಕ್ ಡೌನ್ ➤ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ಆತಂಕಕ್ಕೆ ಕಾರಣವಾಗಿರುವ ಹಿನ್ನಲೆಯಲ್ಲಿ ಜು.16 ರಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೆ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

 ಸೋಮವಾರ 11  ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಹಾಗೂ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅವರ ಸಹಿತ ಹಲವು ಅಧಿಕಾರಿಗಳು ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಕೋಟಾ ಸ್ಪಷ್ಟಪಡಿಸಿದ್ದಾರೆ.

Also Read  ಬೆಳ್ಳಾರೆ: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಮೃತ್ಯು

 

error: Content is protected !!
Scroll to Top