ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಕಾಟ ➤ ಜಿಲ್ಲೆಯಲ್ಲಿ 50ಕ್ಕೇರಿದ ಮೃತರ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.14: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ 131 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಇದೇ ವೇಳೆ ಜಿಲ್ಲೆಯಲ್ಲಿ ನಾಲ್ವರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ. ಬಾಧಿತರ ಪೈಕಿ 16 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಕೋವಿಡ್ 19 ತಗಲಿದೆ. ವಿದೇಶದಿಂದ ಆಗಮಿಸಿದ್ದ ನಾಲ್ವರಿಗೆ, ಇನ್‌ಫ್ಲೂಯೆನ್ಷಾ ಲೈಕ್‌ ಇಲ್‌ನೆಸ್‌ನಿಂದ ಬಳಲುತ್ತಿದ್ದ 63 ಮಂದಿಗೆ ಹಾಗೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 10 ಮಂದಿಗೆ ಕೋವಿಡ್ 19 ಪಾಸಿಟಿವ್‌ ಬಂದಿದೆ.

38 ಮಂದಿಯ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ. 62 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 50ಕ್ಕೆ ಏರಿದ ಸಾವಿನ ಸಂಖ್ಯೆ ಜಿಲ್ಲೆಯಲ್ಲಿ ಮೃತಪಟ್ಟ ನಾಲ್ವರಿಗೆ ಸೋಮವಾರ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.

Also Read  ಎತ್ತಿನ ಗಾಡಿಗೆ ಬೈಕ್ ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಬಾಲಕರ ಮೃತ್ಯು

 

error: Content is protected !!
Scroll to Top