(ನ್ಯೂಸ್ ಕಡಬ) newskadaba.com ಬೈಂದೂರು,ಜು.14: ಪಡುಕೋಣೆಯ ಶ್ರೀರಾಮ ದೇವಸ್ಥಾನಕ್ಕೆ ಜು.13ರ ತಡರಾತ್ರಿ ನುಗ್ಗಿದ ಕಳ್ಳರು 1.5 ಲಕ್ಷ ಮೌಲ್ಯದ ಬೆಳ್ಳಿಯ ಪ್ರಭಾವಳಿಯನ್ನು ಕಳವು ಗೈದಿದ್ದಾರೆ.ದೇವಸ್ಥಾನದ ಮುಖ್ಯದ್ವಾರದ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಈ ಕೃತ್ಯವೆಸಗಿದ್ದಾರೆ.
ಮಂಗಳವಾರ ಬೆಳಿಗ್ಗೆ ಅರ್ಚಕರು ಪೂಜೆಗೆ ಬಂದಾಗ ಬಾಗಿಲು ಒಡೆದಿರುವುದು ಕಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೈಂದೂರು ಸರ್ಕಲ್ ಇನ್ಸ್‍ಪೆಕ್ಟರ್ ಸುರೇಶ್, ಗಂಗೊಳ್ಳಿ ಠಾಣಾಧಿಕಾರಿ ಭೀಮಾಶಂಕರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ದೇವಸ್ಥಾನಗಳ ಭದ್ರತೆಗೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆಯಷ್ಟೇ ಸಭೆ ನಡೆಸಿ, ಸಿಸಿ ಕ್ಯಾಮರ, ಸೈರನ್ ಅಳವಡಿಕೆಯ ಬಗ್ಗೆ ತಿಳಿಸಲಾಗಿತ್ತು. ಮಳೆಗಾಲ ಆದ್ದರಿಂದ ಕಳ್ಳತನ ಪ್ರಕರಣಗಳು ನಡೆಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಸೂಚಿಸಲಾಗಿತ್ತು. ಆದರೆ ಈ ದೇವಸ್ಥಾನದಲ್ಲಿ ಸಿಸಿ ಕ್ಯಾಮೆರಾವಾಗಲಿ, ಸೈರನ್ ಆಗಲಿ ಅಳವಡಿಸಿಲ್ಲ ಎನ್ನಲಾಗಿದೆ. ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.