ಅಗ್ನಿಸಾಕ್ಷಿ ಧಾರವಾಹಿಯ ಖ್ಯಾತ ಸ್ವಾಮೀಜಿ ► ಹಿರಿಯ ನಟ ಸುದರ್ಶನ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.8, ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಸ್ವಾಮೀಜಿ ಪಾತ್ರ ನಿಭಾಯಿಸುತ್ತಿದ್ದ ಹಿರಿಯ ನಟ ಸುದರ್ಶನ್ (78) ನಿಧನರಾಗಿದ್ದಾರೆ.

ಸಪ್ಟೆಂಬರ್ 5ರ ನಸುಕಿನ ಜಾವ ಮನೆಯ ಸ್ನಾನಗೃಹದಲ್ಲಿ ಕಾಲು ಜಾರಿ ಬಿದ್ದು ಮೂಳೆಮುರಿತಕ್ಕೊಳಗಾಗಿದ್ದ ಸುದರ್ಶನ್ ಅವರನ್ನು ಬನ್ನೇರುಘಟ್ಟದ್ದಲ್ಲಿರುವ ಸಾಗರ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ವಯೋಸಹಜ ಖಾಯಿಲೆಯಿಂದಲೂ ಬಳಲುತ್ತಿದ್ದ ಸುದರ್ಶನ್‍ರವರಿಗೆ ಚಿಕಿತ್ಸೆ ಫಲಿಸದೇ ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ.

‘ನಗುವ ಹೂವು’ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ ಸುದರ್ಶನ್ ಸುಮಾರು 60ಕ್ಕೂ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದರು. ‘ವಿಜಯನಗರದ ವೀರ ಪುತ್ರ’ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು.

Scroll to Top