ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ,ಜು.15: ಬೆಳ್ಳಾರೆ ಸಮೀಪದ 62 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದುದಾಗಿ ತಿಳಿದು ಬಂದಿದೆ.

ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ಳಾರೆಯ ನೆಟ್ಟಾರು ನಿವಾಸಿ ಮಹಿಳೆಯನ್ನು ಕುಲಾಯಿ 14ರ ಮಧ್ಯಾಹ್ನ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಮಹಿಳೆ ಬಿಪಿ, ಶುಗರ್, ಲಂಗ್ಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ಅವರ ಕೋವಿಡ್ ಪರೀಕ್ಷೆ ವೇಳೆ ಸೋಂಕು ದೃಢ ಪಟ್ಟಿರುವುದು ಬೆಳಕಿಗೆ ಬಂದಿದೆ ತೀರಾ ಗಂಭೀರಾ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆಗೆ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಬೆಳ್ತಂಗಡಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಮತ್ತೆ ಇಬ್ಬರು ಸ್ಟಾಫ್ ನರ್ಸ್‍ಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೊದಲು, ಒಬ್ಬರು ನರ್ಸ್, ಲ್ಯಾಬ್ ಸಿಬ್ಬಂದಿ ಹಾಗೂ ಆ±ಸ್ಪತ್ರೆಯ ಆಂಬುಲೆನ್ಸ್ ಚಾಲಕನಿಗೆ ಸೋಂಕು ತಗುಲಿತ್ತು. ಇದೀಗಾ ಒಟ್ಟು ಐವರಲ್ಲಿ ಕೊರೋನಾ ಸೋಂಕು ದೃಢಪಟ್ಟಂತಾಗಿದೆ.

Also Read  ಕುಕ್ಕೆ ಸುಬ್ರಮಣ್ಯಕ್ಕೆ ಸಿಎಂ ಬೊಮ್ಮಾಯಿ ಭೇಟಿ

error: Content is protected !!
Scroll to Top