ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ಕೋರ್ಸ್ ➤ ಪರೀಕ್ಷಾ ಶುಲ್ಕದಲ್ಲಿ ಶೆ.50 ರಷ್ಟು ವಿನಾಯಿತಿ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು. 15, ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಕೋರ್ಸ್ ಗಳ ಅರ್ಧವಾರ್ಷಿಕ ಸೆಮಿಸ್ಟರ್ ಗಳ ಪರೀಕ್ಷೆಗಳನ್ನು ಕೊರೋನಾ ಹಿನ್ನೆಲೆ ರದ್ದು ಮಾಡಿರುವುದರಿಂದ ಮುಂದಿನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷಾ ಶುಲ್ಕವನ್ನು ಸಂಗ್ರಹಿಸಿದ್ದು, ಅದನ್ನು ವಾಪಸ್‌ ಕೊಡಿಸಿ ಎಂದು ಮಾಡಿಕೊಂಡಿದ್ದ ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಡಿಸಿಎಂ, ಪರೀಕ್ಷೆ ರದ್ದಾಗಿದ್ದರೂ ಮೌಲ್ಯಮಾಪನ ಪ್ರಕ್ರಿಯೆ ಇರುತ್ತದೆ. ಹೀಗಾಗಿ ಮುಂದಿನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲು ಸೂಚಿಸಲಾಗುವುದು ಎಂದು ಹೇಳಿದ್ದಾರೆ.

Also Read  ʻನಮ್ಮ ಮೆಟ್ರೋ’ದಲ್ಲಿ ಟಿಕೆಟ್‌ ರಹಿತ ಪ್ರಯಾಣ - ಯೂಟ್ಯೂಬರ್ ವಿರುದ್ಧ BMRCL ಕ್ರಮ

ಈ ಸಂಬಂಧ ಸುತ್ತೋಲೆಯನ್ನು ಎಲ್ಲ ವಿಶ್ವವಿದ್ಯಾಲಯಗಳಿಗೆ ಕಳುಹಿಸಲು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅವರಿಗೆ ಉಪಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

error: Content is protected !!
Scroll to Top