2ನೇ ತರಗತಿ ಬಾಲಕನ ಬರ್ಬರ ಹತ್ಯೆ ► ಶಾಲಾ ಟಾಯ್ಲೆಟ್‍ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವ ಪತ್ತೆ..!!!

(ನ್ಯೂಸ್ ಕಡಬ) newskadaba.com ಗುರ್ಗಾವ್,ಸೆ.8, ಇಲ್ಲಿನ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 2ನೇ ತರಗತಿ ವಿದ್ಯಾರ್ಥಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.

 7 ವರ್ಷದ ಪ್ರದ್ಯುಮನ್ ಕೊಲೆಯಾದ ಬಾಲಕ. ಪ್ರದ್ಯುಮನ್‍ನ ಕತ್ತು ಸೀಳಲಾಗಿದ್ದು, ಮೃತದೇಹದ ಪಕ್ಕದಲ್ಲಿ ಚಾಕು ಪತ್ತೆಯಾಗಿದೆ.

ಇಂದು ಬೆಳಿಗ್ಗೆ 8.45ರ ವೇಳೆಗೆ ಶಾಲೆಯ ಅಧಿಕಾರಿಯೊಬ್ಬರು ಟಾಯ್ಲೆಟ್‍ಗೆ ಹೋದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ದುರಾದೃಷ್ಟವಶಾತ್  ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.   ಬಾಲಕನ ತಂದೆ ವರುಣ್ ಠಾಕೂರ್ ಖಾಸಗಿ ಕಂಪೆನಿಯೊಂದರಲ್ಲಿ ಕ್ವಾಲಿಟಿ ಮ್ಯಾನೇಜರ್ ಆಗಿದ್ದು, ಮಗನನ್ನು ಶಾಲೆಗೆ ಬಿಟ್ಟು ಹೋದ ಸ್ವಲ್ಪ ಸಮಯದಲ್ಲೇ ಈ ಘಟನೆ ನಡೆದಿದೆ.

Also Read  18 ಕ್ಯಾರೆಟ್‌ ಚಿನ್ನದಿಂದ ಪ್ರಧಾನಿ ಮೋದಿ ಪ್ರತಿಮೆ

ಈ ಕುರಿತಾಗಿ ಪೊಲೀಸರು ಶಾಲೆಯ ಸಿಬ್ಬಂದಿ, ಶಿಕ್ಷಕರು ಹಾಗೂ ಪ್ರದ್ಯುಮನ್‍ನ ಸ್ನೇಹಿತರನ್ನು ವಿಚಾರಣೆ ಮಾಡಿದ್ದಾರೆ. ಟಾಯ್ಲೆಟ್ ಹೊರಗಡೆ ಕಾರಿಡಾರ್‍ನಲ್ಲಿರುವ ಸಿಸಿಟಿವಿ ಸೇರಿದಂತೆ ಶಾಲಾ ಆವರಣದಲ್ಲಿರುವ ಸುಮಾರು 30 ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಯನ್ನು ಪೊಲೀಸ್ ತಂಡ ಪರೀಶೀಲನೆ ಮಾಡುತ್ತಿದೆ.

ಪೊಲೀಸರ ತಂಡ ಮತ್ತು ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಧಾವಿಸಿದ್ದು, ಸ್ಥಳದಲ್ಲಿದ್ದ ಒಂದು ಚಾಕುವನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಗುರುಗ್ರಾಮ ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top