(ನ್ಯೂಸ್ ಕಡಬ) newskadaba.com.ಮಂಗಳೂರು,ಜು.16: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಬೆಳಗ್ಗಿನಿಂದ ರಾತ್ರಿವರೆಗೂ ನಿರಂತರವಾಗಿ ಮಳೆ ಸುರಿದಿದೆ. ಕೆಲವೆಡೆ ಸಾಧಾರಣ, ಕೆಲವೆಡೆ ಉತ್ತಮ ಮಳೆಯಾಗಿದೆ. ಕಳೆದೆರಡು ದಿನಗಳಿಂದ ಮಳೆ ಸ್ವಲ್ಪ ಚುರುಕುಗೊಂಡಿದ್ದು, ಹವಾಮಾನ ಇಲಾಖೆಯೂ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮುಂದಿನ ಕೆಲವು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಬೆಳಗ್ಗಿನಿಂದ ಸಾಯಂಕಾಲವರೆಗೆ ಕಡಬ, ಮರ್ಧಾಳ, ಬಿಳಿನೆಲೆ, ಕಾಣಿಯೂರು ನೂಜಿಬಾಳ್ತಿಲದಲ್ಲಿ ಉತ್ತಮ ಮಳೆ ಸುರಿದಿದೆ. ಮಳೆಯೊಂದಿಗೆ ಹಗುರವಾಗಿ ಗಾಳಿಯೂ ಬೀಸುತ್ತಿದೆ. ಸಮುದ್ರದಿಂದಲೂ ತೀರಕ್ಕೆ ಗಂಟೆಗೆ 45-55 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ಕುಂದಾಪುರ, ಕಾರ್ಕಳ , ಸಹಿತ ಉಡುಪಿ ಜಿಲ್ಲೆಯಲ್ಲಿ ಸರಾಸರಿ 10.0 ಮಿ.ಮೀ ಮಳೆ ಸುರಿದಿದೆ.