ಉಡುಪಿ :ಆರಕ್ಕೇರಿದ ಕೊರೊನಾ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಉಡುಪಿ ,ಜು.16: ಕೊರೊನಾ ವೈರಸ್‌ಗೆ ಉಡುಪಿಯಲ್ಲಿ ಇಂದು (ಗುರುವಾರ) 6ನೇ ಬಲಿ ಪಡೆದಿದೆ. ಮೃತರನ್ನು ಉಡುಪಿ ನಿವಾಸಿ 49 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ.

 

ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಇವರು ಮಧುಮೇಹ ಮತ್ತು ಉಸಿರಾಟದ ಸಮಸ್ಯೆಗಳಂತಹ ಇತರ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದರು. ಜುಲೈ 15 ರ ಬುಧವಾರ ರಾತ್ರಿ ಅವರ ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರನ್ನು ಉಡುಪಿಯ ಡಾ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು . ಆದರೆ ಗುರುವಾರ ಚಿಕಿತ್ಸೆ ಫಲಿಸದೆ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಕೊರೊನಾ ವೈರಸ್‌ಗೆ ಸಂಬಂಧಿಸಿದ ಸಾವಿನ ಸಂಖ್ಯೆ ಆರಕ್ಕೆ ಏರಿದೆ.

Also Read  ಬಂಟ್ವಾಳ: ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು

error: Content is protected !!
Scroll to Top