ನಾಳೆ ಶುಕ್ರವಾರ (ಜು.17) ಜುಮಾ ನಮಾಝ್ ಇರಲ್ಲ ➤ ಡಿ.ಸಿ ಆದೇಶ

(ನ್ಯೂಸ್ ಕಡಬ)newskadaba.com ಮಂಗಳೂರು: ಜು.16, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಧಾರ್ಮಿಕ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 17ರ ಶುಕ್ರವಾರದಂದು ಜುಮಾ ನಮಾಜ್ ರದ್ದುಗೊಳಿಸಲಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಜುಲೈ 17ರ ಶುಕ್ರವಾರದ ಜುಮಾ ನಮಾಝ್ ಸೇರಿದಂತೆ ಸಾಮೂಹಿಕ ಪ್ರಾರ್ಥನೆಗಳನ್ನು ರದ್ದುಗೊಳಿಸಲಾಗಿದ್ದು, ಜುಲೈ 22 ರವರೆಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top