ಕೌಕ್ರಾಡಿಯ ಇಬ್ಬರಿಗೆ ಕೊರೋನಾ ಪಾಸಿಟಿವ್ ➤ ನೆಲ್ಯಾಡಿಯ ಖಾಸಗಿ ಆಸ್ಪತ್ರೆ ಸೀಲ್ ಡೌನ್..⁉️

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.17. ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಕ್ರಾಡಿಯ ಇಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜ್ವರದ ಹಿನ್ನೆಲೆಯಲ್ಲಿ ನೆಲ್ಯಾಡಿಯ ಪ್ರಸಿದ್ಧ ಖಾಸಗಿ ಆಸ್ಪತ್ರೆಯಲ್ಲಿ ಇವರು ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದ್ದು, ಇವರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಪಾಸಿಟಿವ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ನೆಲ್ಯಾಡಿಯ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡುವ ಬಗ್ಗೆ ಅಧಿಕಾರಿಗಳಿಂದ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Also Read  ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಸೇರಿದಂತೆ 88 ಕಡೆ ಭೂಕುಸಿತ ಖಚಿತ; ಡೇಂಜರ್ ಝೋನ್

error: Content is protected !!
Scroll to Top