ಅಕ್ರಮ ದನ ಸಾಗಾಟದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ,ಜು.17 : ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು  ತೆಗೆದುಕೊಂಡು ಹೋಗುತ್ತಿದ್ದ ವೇಳೆ ಸುಳ್ಯ ಪೊಲೀಸರು ದಾಳಿ ನಡೆಸಿ ಒರ್ವನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಡಗು ನಿವಾಸಿ ಕರಿಕೆ ಮನೆಯ ಅಬ್ದುಲ್ ಫಾರೂಕ್ (45) ಎಂದು ಗುರುತಿಸಲಾಗಿದೆ.

ಜುಲೈ 14 ರಂದು ಸುಳ್ಯ ಕಸಬಾ ಗ್ರಾಮದ ಜ್ಯೋತಿ ಸರ್ಕಲ್ ಎಂಬಲ್ಲಿ ಪಿಕಪ್ ವಾಹನದಲ್ಲಿ ಎರಡು ದನಗಳನ್ನು  ತೆಗೆದುಕೊಂಡು ಹೋಗುತ್ತಿದ್ದುದನ್ನು ಕಂಡು ಸುಳ್ಯ ಪೊಲೀಸ್ ಠಾಣೆ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ತಡೆಯಲು ಯತ್ನಿಸಿದ್ದರು. ಆದರೆ ಪಿಕ್ಅಪ್ ಚಾಲಕ ಆರೋಪಿ ಅಬ್ದುಲ್ ಫಾರೂಕ್ ತಪ್ಪಿಸಿಕೊಳ್ಳುವ ಯತ್ನದಲ್ಲಿ ಪೊಲೀಸರ ಮೇಲೆ ವಾಹನವನ್ನು ಚಲಾಯಿಸುವ ಮೂಲಕ ಹಲ್ಲೆಗೆ ಮುಂದಾಗಿದ್ದಾನೆ. ಸದ್ಯ ಆರೋಪಿ ಅಬ್ದುಲ್ ಫಾರೂಕ್ ನನ್ನು ಬಂಧಿಸಿ ಆತನಲ್ಲಿದ್ದ ತಲವಾರು ಹಾಗೂ ಇತರೆ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Also Read  ಜೂನಿಯರ್ ಅಥ್ಲೆಟಿಕ್ ಮೀಟ್ ಡಿಸ್ಕಸ್ ಥ್ರೋ ► ಕಡಬದ ಸೈಂಟ್ ಆನ್ಸ್ ಶಾಲೆಯ ಗುರುಕಿರಣ್ ಗೆ ಕಂಚು

error: Content is protected !!
Scroll to Top