ಬೆಳ್ತಂಗಡಿ: ಪತ್ನಿಗೆ ಕೊರೋನಾ ದೃಢ ➤ ಆಸ್ಪತ್ರೆಯ ಗೇಟ್ ಮುರಿದು ತಾಯಿ-ಮಗುವನ್ನು ಕರೆದೊಯ್ದ ಪತಿರಾಯ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು. 17, ಇಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಮಹಿಳೆಯೋರ್ವರಿಗೆ ಕೊರೊನಾ ದೃಢಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆ ಆಕೆಯ ಪತಿಯು ಆಸ್ಪತ್ರೆಯ ಗೇಟಿನ ಬೀಗ ಮುರಿದು ಒಳ ಪ್ರವೇಶಿಸಿ ಮಗು ಮತ್ತು ಬಾಣಂತಿಯನ್ನು ತನ್ನ ಕಾರಿನಲ್ಲಿ ಕರೆದೊಯ್ದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ನಾವೂರು ಗ್ರಾಮದ ಮಹಿಳೆಯೋರ್ವರು ಬುಧವಾರ ಇಲ್ಲಿ ಹೆರಿಗೆಗಾಗಿ ದಾಖಲಾಗಿದ್ದರು. ಈ ಸಂದರ್ಭ ಅವರ ಗಂಟಲ ದ್ರವವನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿತ್ತು. ಬುಧವಾರ ರಾತ್ರಿಯೇ ಅವರಿಗೆ ಹೆರಿಗೆ ಆಗಿತ್ತು. ಗುರುವಾರ ಸಂಜೆ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದು, ಇದನ್ನು ಮಹಿಳೆಯು ಪತಿಗೆ ತಿಳಿಸಿದ ಕೂಡಲೇ ಅವರು ಕಾರಿನಲ್ಲಿ ಬಂದು ತಾಯಿ- ಮಗುವನ್ನು ಕರೆದೊಯ್ದಿದ್ದಾರೆ. ಅವರು ಇನ್ನು ಎಲ್ಲಿಗೆ ತೆರಳಿರಬಹುದು ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Also Read  ಲಕ್ಷದೀಪೋತ್ಸವ ದಿಕ್ಸೂಚಿ ನುಡಿ ➤ ಜಗವು ಧರ್ಮದ ನೆಲೆಯಾಗಲಿ: ಡಾ.ಡಿ.ವೀರೇಂದ್ರ ಹೆಗ್ಗಡೆ

error: Content is protected !!
Scroll to Top