ಕೊರೋನಾ ಸೋಂಕಿತ ಭೇಟಿ ನೀಡಿದ ಹಿನ್ನೆಲೆ ➤ ಕಡಬ ಸಮುದಾಯ ಆರೋಗ್ಯ ಕೇಂದ್ರ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ, ಜು.17. ಕಡಬದ ಇಬ್ಬರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಭೇಟಿ ನೀಡಿದ್ದಾರೆ ಎನ್ನಲಾದ ಕಡಬದ ಸಮುದಾಯ ಆರೋಗ್ಯ ಕೇಂದ್ರ ಎರಡು ದಿನಗಳ ಕಾಲ ಸೀಲ್ ಡೌನ್ ಆಗಲಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಚಿತ್ರಾ ರಾವ್, ಕೊರೋನಾ ಪಾಸಿಟಿವ್ ಬಂದ ವ್ಯಕ್ತಿಗಳು ಆಸ್ಪತ್ರೆಗೆ ಭೇಟಿ ನೀಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Scroll to Top