ಶೋಪಿಯಾನ್ ಜಿಲ್ಲೆಯಲ್ಲಿ ಎನ್’ಕೌಂಟರ್ ➤ 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ



(ನ್ಯೂಸ್ ಕಡಬ) newskadaba.com ಶ್ರೀನಗರ,ಜು.18: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿಕುಳಿತಿರುವ ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು.





 

ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್’ಕೌಂಟರ್ ನಡೆಸಲು ಆರಂಭಿಸಿದ್ದು, ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿವೆ. ನಿನ್ನೆ ಕೂಡ ಕುಲ್ಗಾಂ ಜಿಲ್ಲೆಯ ನಾಗ್ನಾಡ್-ಚಿಮ್ಮರ್ ಎಂಬ ಪ್ರದೇಶದಲ್ಲಿ ಎನ್ಕೌಂಟರ್ ನಡೆಸಿದ್ದ ಸೇನಾಪಡೆಗಳು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿತ್ತು.






 

error: Content is protected !!
Scroll to Top