ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ,ಜು.18: ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಆಲ್ಟೋ 800 ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಮತ್ತು ಅಗ್ನಿ ಶಾಮಕ ದಳದ ಕಛೇರಿ ನಾಮಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರಾವಾಗಿ  ಗಾಯಗೊಂಡ ಘಟನೆ ಇಂದು ನಡೆದಿದೆ.

ಕಾರಿನಲ್ಲಿ ಓರ್ವ ಯುವತಿ ಮತ್ತು ಎರಡು ಮಂದಿ ಯುವಕರು ಇದ್ದರೆಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ್ದ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಗಾಯಳುಗಳನ್ನು ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Scroll to Top