ಕ್ವಾರಂಟೈನ್ ಉಲ್ಲಂಘನೆ ➤ ಸುಳ್ಯದ ಖಾಸಗಿ ಆಸ್ಪತ್ರೆಯ ಐವರು ವೈದ್ಯರ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು.19. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಸುಳ್ಯದ ಖಾಸಗಿ ವೈದ್ಯಕೀಯ ಕಾಲೇಜಿನ ಐವರು ವೈದ್ಯರ ವಿರುದ್ಧ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆವಿಜಿ ವೈದ್ಯಕೀಯ ಕಾಲೇಜಿನ ವೈದ್ಯರುಗಳಾದ ವಾನನ್ಸ್, ದೇವರಾಮನ್, ಪ್ರೇಮ್ ಕುಮಾರ್ ಜಿ, ಪ್ರಬೀನ್ ಜಾರ್ಜ್, ಶೃತಿ ಸಿ. ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯಲ್ಲಿದ್ದ ಸಿಬ್ಬಂದಿಗೆ ಕೊರೋನ ಸೋಂಕು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ವೈದ್ಯರುಗಳನ್ನು 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಆದರೆ ಐವರು ವೈದ್ಯರು ನಿಯಮ ಉಲ್ಲಂಘಿಸಿ ಊರಿಡೀ ಸುತ್ತಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಪಿಎಸ್ ಆಧಾರಿತ ಮಾಹಿತಿ ಪಡೆಯಲಾಗಿ ಕ್ವಾರಂಟೈನ್ ಉಲ್ಲಂಘಿಸಿದ್ದ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Also Read  ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಾಹನಗಳು ಭಸ್ಮ

error: Content is protected !!
Scroll to Top