ಕೊಯಿಲ ಗ್ರಾಮ ಪಂಚಾಯತ್ ಸದಸ್ಯ ವಿಷ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮ ಪಂಚಾಯತ್ ಸದಸ್ಯರೋರ್ವರು ಶುಕ್ರವಾರದಂದು ವಿಷ ಸೇವಿಸಿ‌ದ್ದು, ಶನಿವಾರ ರಾತ್ರಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕೊಯಿಲ ಗ್ರಾಮ ಪಂಚಾಯತಿ ಸದಸ್ಯ, ವಳಕಡಮ ನಿವಾಸಿ ದಿ| ವೆಂಕಪ್ಪ ಕುಂಬಾರ ಎಂಬವರ ಪುತ್ರ ನಾಗೇಶ್ ಕುಂಬಾರ (30) ಎಂದು ಗುರುತಿಸಲಾಗಿದೆ. ಕೈ ಸಾಲದ ಬಾಧೆಯಿಂದ ಬಳಲುತ್ತಿದ್ದರೆನ್ನಲಾಗಿದ್ದು, ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಲಾಗಿದೆ.

Scroll to Top