(ನ್ಯೂಸ್ ಕಡಬ) newskadaba.com ಮಂಗಳೂರು :ಜು.19., ಮಹಾಮಾರಿ ಕೊರೊನ ಮನುಕುಲಕ್ಕೆ ಮಾತ್ರವಲ್ಲದೆ ಎಲ್ಲಾ ದೈವ ದೇವರಿಗೂ ಕಂಟಕವಾಗಿ ಪರಿಣಮಿಸಿದೆ. ಹೌದು ತುಳುನಾಡಿನ ಆರಾಧ್ಯ ದೈವ ನಾಗನ ಆರಾಧನೆಯ ಮೇಲೂ ಪರಿಣಾಮ ಬೀರಿದೆ.
ಈ ಬಾರಿ ನಾಗರ ಪಂಚಮಿಯಂದು ಮಂಗಳೂರಿನ ಇತಿಹಾಸ ಪ್ರಸಿದ್ದ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಪ್ರತೀ ವರ್ಷ ನಾಗರಪಂಚಮಿ ಹಿನ್ನೆಲೆ ಲಕ್ಷಾಂತರ ಭಕ್ತರಿಂದ ಪೂಜೆ ಸಲ್ಲಿಕೆಯಾಗುತ್ತಿತ್ತು. ಆದ್ರೆ ಈ ಬಾರೀ ಕೊರೋನಾ ಹಿನ್ನೆಲೆ ನಾಗರ ಪಂಚಮಿಯ ದಿನ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ.ನಾಗರಪಂಚಮಿ ದಿನವಾದ ಜು.25ರ ಶನಿವಾರದಂದು ಭಕ್ತರ ಪ್ರವೇಶ ಸಂಪೂರ್ಣ ನಿರ್ಬಂಧಿಸಲಾಗಿದೆ ಎಂದು ದೇವಾಳದ ಆಡಳಿತ ಮಂಡಳಿ ಮಾಹಿತಿ ನೀಡಿದೆ.
ನಾಗರ ಪಂಚಮಿಯ ದಿನದಂದು ಸೇವೆಗಳು, ಸೇವಾಪ್ರಸಾದ, ತೀರ್ಥ ಪ್ರಸಾದ ಮತ್ತು ಅನ್ನ ಸಂತರ್ಪಣೆಗಳು ಇರುವುದಿಲ್ಲ.ನಾಗ ತಂಬಿಲ, ಪಂಚಾಮೃತ, ಆಶ್ಲೇಷ ಬಲಿ ಮೊದಲಾದ ಯಾವುದೇ ಸೇವೆಗಳು ಇಲ್ಲ ಎಂದು ಕುಡುಪು ಶ್ರೀ ಅನಂತ ಪದ್ಮನಾಭ ದೇವಳದ ಆಡಳಿತ ಮಂಡಳಿ ತಿಳಿಸಿದೆ.