ಫಾ. ಮುಲ್ಲರ್ಸ್‌ ಆಸ್ಪತ್ರೆಗೆ ಅಧಿಕಾರಿಗಳ ಭೇಟಿ ➤ ಕೋವಿಡ್‌ ಚಿಕಿತ್ಸೆಗಳ ಬಗ್ಗೆ ಪರಿಶೀಲನೆ..!

(ನ್ಯೂಸ್ ಕಡಬ) newskadaba.com ಮಂಗಳೂರು,ಜು 20:ಕೊವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ಆಯ್ಕೆಯಾಗಿರುವ ಮಂಗಳೂರಿನ ಫಾ. ಮುಲ್ಲರ್‌ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಜನ ಪ್ರತಿನಿಧಿ ಮತ್ತು ಅಧಿಕಾರಿಗಳ ತಂಡ ಸೋಮವಾರ ಭೇಟಿ ನೀಡಿ, ಕೋವಿಡ್ 19 ಚಿಕಿತ್ಸೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ವೈದ್ಯರೊಂದಿಗೆ ಸಭೆ ನಡೆಸಿದರು.

ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮತ್ತಿತರ ಅಧಿಕಾರಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Also Read  ಗುಬ್ಬಿಯಲ್ಲಿ ಭೀಕರ ಅಪಘಾತ: ಹೊತ್ತಿ ಉರಿದ ಕಾರು; ಮೂವರು ಸಜೀವ ದಹನ

error: Content is protected !!
Scroll to Top