ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೊವಿಡ್​-19 ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು ಜು.20: ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೂಡ ಕೊರೊನಾ ಸೋಂಕು ತಗುಲಿದೆ.ಐಶ್ವರ್ಯಾ ಅರ್ಜುನ್ ಸರ್ಜಾ ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಈ ವಿಷಯವನ್ನು ಬರೆದುಕೊಂಡಿದ್ದಾರೆ. ಇತ್ತೀಚೆಗೆ ಕೊವಿಡ್​-19 ಟೆಸ್ಟ್​ಗೆ ಒಳಗಾಗಿದ್ದೆ. ಸೋಂಕು ತಗುಲಿದ್ದು ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ.

ವೃತ್ತಿಪರ ವೈದ್ಯಕೀಯ ತಂಡದ ಸಲಹೆ ಮೇರೆಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಎಲ್ಲರೀತಿಯ ಮುನ್ನೆಚ್ಚರಿಕೆ ಕ್ರಮವನ್ನೂ ವಹಿಸಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಎಲ್ಲರೂ ಕೊವಿಡ್​-19 ಟೆಸ್ಟ್​ಗೆ ಒಳಗಾಗಿ. ಕಾಳಜಿ ವಹಿಸಿ, ತಪ್ಪದೆ ಮಾಸ್ಕ್​ ಧರಿಸಿ. ನನ್ನ ಆರೋಗ್ಯದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಧ್ರುವಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಅವರಲ್ಲೂ ಕೊರೊನಾ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸೇರಿದ ಒಂದೇ ದಿನದಲ್ಲಿ ಡಿಸ್​ಚಾರ್ಜ್​ ಆಗಿರುವ ದಂಪತಿ, ಸದ್ಯ ಹೋಂ ಕ್ವಾರಂಟೈನ್​​ನಲ್ಲಿದ್ದಾರೆ.

Also Read  ಕುಂತೂರು ಸಂಪರ್ಕ ಸೇತುವೆ ನಿರ್ಮಾಣ ಪೂರ್ಣ➤ಮುಖ್ಯಮಂತ್ರಿಗೆ ಅಭಿನಂದನೆಸಲ್ಲಿಸಿದ ಕೊಂತೂರಿನ ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳು

error: Content is protected !!
Scroll to Top