ದ.ಕ. ಜಿಲ್ಲೆಯಲ್ಲಿ ಕೊರೊನಾಗೆ ಇಂದು ಐವರು ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.20: ಕರಾವಳಿಯಲ್ಲಿ ಕೊರೋನಾ ಭೀತಿ ಮಿತಿಮೀರುತ್ತಿದೆ. ದಿಕಳೆದಂತೆ ಸೋಂಕಿತರ ಸಂಖ್ಯೆಯ ಜೊತೆಗೆ ಕೊವೀಡ್ ನಿಂದ ಮೃತಪಡುತ್ತಿರುವವರ ಸಂಖ್ಯೆಯು ಹೆಚ್ಚುತ್ತಲೇ ಇದೆ. ಇಂದು ದ.ಕ. ಜಿಲ್ಲೆಯಲ್ಲಿ ಮತ್ತೆ ಐವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮಂಗಳೂರು ಮೂಲದ 55 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಜುಲೈ 15ರಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು.

ಮಂಗಳೂರು ನಿವಾಸಿಯಾಗಿರುವ 63 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಜುಲೈ 18ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು, ಇನ್ನು ಬೆಳ್ತಂಗಡಿ ನಿವಾಸಿ 42 ವರ್ಷದ ವ್ಯಕ್ತಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಜುಲೈ 19ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ, ಚಿಕ್ಕಮಗಳೂರು ಮೂಲದ 65 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಎರಡು ತಿಂಗಳ ಶಿಶು ಕೊರೊನಾ ಸೋಂಕಿಗೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತೀವ್ರ ಜ್ವರ, ವಾಂತಿ, ಉಸಿರಾಟದ ತೊಂದರೆಯಿಂದಾಗಿ ಶಿಶುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಜುಲೈ 17ರಂದು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜುಲೈ 18ರಂದು ಮಗು ಮೃತಪಟ್ಟಿತ್ತು.

Also Read  ಇಬ್ಬರು ಪುತ್ರಿಯರ ಜೊತೆ ಮಹಿಳೆ ನಾಪತ್ತೆ

error: Content is protected !!
Scroll to Top