ಅನಾರೋಗ್ಯದಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಟಂಡನ್ ವಿಧಿವಶ

(ನ್ಯೂಸ್ ಕಡಬ)newskadaba.com ಲಕ್ನೋ: ಜು.21, ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರಿಗೆ 85 ವರ್ಷ ವಯಸ್ಸಾಗಿತ್ತು.

ಕಳೆದ ಜೂನ್ 11 ರಂದು ಉಸಿರಾಟದ ಸಮಸ್ಯೆ, ಮೂತ್ರಕೋಶದ ತೊಂದರೆ ಹಾಗೂ ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ಲಕ್ನೋದಲ್ಲಿನ ಮೆದಂತಾ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಲಾಗಿತ್ತು. ಮಾತ್ರವಲ್ಲದೆ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿದ್ದರೂ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.

Also Read  ಅನಂತ್ ನಾಗ್: ಭದ್ರತೆ ಪಡೆಯ ಗುಂಡಿಗೆ ಬಲಿಯಾದ ನಾಲ್ವರು ಉಗ್ರರು

error: Content is protected !!
Scroll to Top