ಕೇರಳದ ಯುವಕ ಮಣಿಪಾಲ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ, ಜು.21: ಅನಾರೋಗ್ಯದಿಂದ ಕಳೆದ ಕೆಲ ದಿನಗಳಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇರಳ ಯುವಕನೋರ್ವ ಮೃತಪಟ್ಟಿದ್ದು, ಆತನಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಕೇರಳದ ಕಣ್ಣೂರು ಜಿಲ್ಲೆಯ 35 ವರ್ಷದ ಯುವಕ ಕಿಡ್ನಿ ಸಮಸ್ಯೆಯಿಂದ ಕಳೆದ 15 ದಿನಗಳ ಹಿಂದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ.

 

ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ಯುವಕ ಮೃತಪಟ್ಟಿದ್ದಾನೆ. ಆತನ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆತನಿಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಲಾಕ್ ಡೌನ್ ಮತ್ತು ಉಡುಪಿ ಗಡಿ ಮುಚ್ಚಿರುವ ಕಾರಣ ಯುವಕ ಸಂಬಂಧಿಗಳಿಗೆ ಮಣಿಪಾಲಕ್ಕೆ ಬರಲು ತೊಂದರೆಯಾಗಿದ್ದು, ಮೃತ ಯುವಕನ ಅಂತ್ಯ ಸಂಸ್ಕಾರವನ್ನು ಉಡುಪಿಯಲ್ಲೇ ನಡೆಸಲು ಸಿದ್ದತೆ ನಡೆಸಲಾಗಿದೆ ಎಂದು ವರದಿಯಾಗಿದೆ.

Also Read  ಕರಾವಳಿಯಲ್ಲಿ ಮೀನುಗಾರಿಕಾ ಬಂದರು ನಿರ್ಮಾಣ ಅಭಿವೃದ್ದಿಗಾಗಿ ಕೆಂದ್ರಕ್ಕೆ ಪ್ರಸ್ತಾಪ ➤ ಸಚಿವ ಎಸ್.ಅಂಗಾರ

 

error: Content is protected !!
Scroll to Top