ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ ➤ ಕೋರ್ಟ್ ಎರಡು ದಿನ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಉಡುಪಿ, ಜು.21: ಇಲ್ಲಿನ ನ್ಯಾಯಾಲಯದ ನ್ಯಾಯಾಧೀಶರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಉಡುಪಿ ನ್ಯಾಯಾಲಯ ಸಂಕೀರ್ಣವನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ನ್ಯಾಯಾಧೀಶರಿಗೆ ಕೋವಿಡ್ -19 ಸೋಂಕು ದೃಢವಾದ ಹಿನ್ನಲೆಯಲ್ಲಿ ಕೋರ್ಟ್ ಆವರಣವನ್ನು ಎರಡು ದಿನ ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು. ಜು. 21 ಮತ್ತು 22ರಂದು ಕೋರ್ಟ್ ಸೀಲ್ ಡೌನ್ ಆಗಿರಲಿದೆ ಎಂದು ವರದಿಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಾಣುತ್ತಿದೆ. ಸೋಮವಾರ ಜಿಲ್ಲೆಯಲ್ಲಿ 98 ಜನರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2321ಕ್ಕೆ ಏರಿಕೆಯಾಗಿದೆ.

Also Read  ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ 'ಭಗ್ನಪ್ರೇಮಿ'...!!                            

 

error: Content is protected !!
Scroll to Top