5 ಗಂಟೆಗೆ ರಾಜ್ಯವನ್ನು ಉದ್ದೇಶಿಸಿ ಸಿಎಂ ಬಿಎಸ್ ವೈ ಭಾಷಣ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳು ಫೇಸ್ ಬುಕ್, ಯೂಟ್ಯೂಬ್ ಮೂಲಕ ಜನರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಬಿ. ಎಸ್. ಯಡಿಯೂರಪ್ಪ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ. ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಲಾಕ್ ಡೌನ್ ಬುಧವಾರ ಬೆಳಗ್ಗೆ 5 ಗಂಟೆಗೆ ಮುಗಿಯಲಿದೆ. ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಅವರ ಭಾಷಣ ಕುತೂಹಲ ಮೂಡಿಸಿದೆ. ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 67,420ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 33,229ಕ್ಕೆ ಏರಿದೆ. ಕರ್ನಾಟಕದ ಯಾವುದೇ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ. ಆದ್ದರಿಂದ, ಕೊರೊನಾ ನಿಯಂತ್ರಣಕ್ಕೆ ಕೆಲವು ಮಾರ್ಗಸೂಚಿಗಳನ್ನು ಸಿಎಂ ಯಡಿಯೂರಪ್ಪರವರು ಪ್ರಸ್ತಾಪಿಸುವ ನಿರೀಕ್ಷೆ ಇದೆ.

Also Read  ಕಾಣಿಯೂರು: ಕಾಲೇಜು ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ

 

error: Content is protected !!
Scroll to Top