ದ. ಕನ್ನಡದಲ್ಲಿ ಮತ್ತೆ 14 ದಿನ ಲಾಕ್ ಡೌನ್ ಸಾಧ್ಯತೆ..?!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.21: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿರುವ ಕಾರಣ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಲು ಜಿಲ್ಲೆಯ ಜನಪ್ರತಿನಿಧಿಗಳು ಒಲವು ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಮತ್ತೊಂದು ವಾರಕ್ಕೆ ಲಾಕ್ ಡೌನ್ ವಿಸ್ತರಣೆ ಮಾಡಲು ಜನಪ್ರತಿನಿಧಿಗಳು, ಸಾರ್ವಜನಿಕರು ಒಲವು ತೋರಿಸುತ್ತಿದ್ದಾರೆ. ಜಿಲ್ಲಾಡಳಿತ ಈ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದರು. ಇವತ್ತು ಸಂಜೆ ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಸಲಾಗುವುದು. ಅದರಲ್ಲಿ ಲಾಕ್ ಡೌನ್ ವಿಸ್ತರಣೆ ಅಗತ್ಯವೇ ಎಂಬ ಕುರಿತಾಗಿ ಚರ್ಚೆ ನಡೆಸಲಾಗುವುದು. ಬಳಿಕ ನಾಳೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

Also Read  ಮತ್ತೊಂದು ಡೆಡ್ಲಿ ವೈರಸ್ ಅಟ್ಯಾಕ್ ➤ ನೀರಿನಲ್ಲಿ ಕಂಡು ಬಂತು ಮನುಷ್ಯರ ಮೆದುಳು ತಿನ್ನುವ ಅಮಿಬಾ..!!

 

error: Content is protected !!
Scroll to Top