ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್​ಗಳಿಗೆ ಬಂಪರ್ ಗಿಫ್ಟ್​ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಕೊರೋನಾ ಸೋಂಕನ್ನು ತಡೆಗಟ್ಟಲು ಕೊರೋನಾ ವಾರಿಯರ್​ಗಳಾಗಿ ಹೋರಾಡುತ್ತಿರುವ ವೈದ್ಯರು, ನರ್ಸ್​ಗಳು ಹಗಲು-ರಾತ್ರಿ ಕೊರೋನಾ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನರ್ಸ್​ಗಳಿಗೆ ರಾಜ್ಯ ಸರ್ಕಾರ ಬಂಪರ್ ಉಡುಗೊರೆಯೊಂದನ್ನು ನೀಡಿದೆ. ಆಯುಷ್ ಮತ್ತು ಯುನಾನಿ ವೈದ್ಯರ ತಿಂಗಳ ಸಂಬಳವನ್ನು 48,000ಕ್ಕೆ ಏರಿಕೆ ಮಾಡಲಾಗಿದೆ. ಹಾಗೇ, ತಿಂಗಳಿಗೆ 15 ಸಾವಿರ ರೂ. ಸಂಬಳ ಪಡೆಯುತ್ತಿದ್ದ ನರ್ಸ್​ಗಳ ವೇತನವನ್ನು 30 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ.

 


ಈ ಬಗ್ಗೆ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ಆಯುಷ್, ಯುನಾನಿ ವೈದ್ಯರಿಗೆ ನೀಡಲಾಗುವ ವೇತನವನ್ನು 25ರಿಂದ 48 ಸಾವಿರಕ್ಕೇರಿಕೆ ಮಾಡಲಾಗಿದೆ. ತಾತ್ಕಾಲಿಕವಾಗಿ‌ ಕೋವಿಡ್ ಕಾರ್ಯ ನಿರ್ವಹಣೆಗೆ ನೇಮಕ ಮಾಡಿಕೊಳ್ಳುವ ಎಂಬಿಬಿಎಸ್​ ವೈದ್ಯರಿಗೆ 80 ಸಾವಿರ ರೂ. ವೇತನ ನೀಡಲಾಗುವುದು. 6 ತಿಂಗಳ ಕಾಲ ಕರ್ನಾಟಕದ ನರ್ಸ್​ಗಳ ವೇತನವನ್ನು 30 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಬಿಬಿಎಂಪಿ, ಆರೋಗ್ಯ, ಆಯುಷ್ ಎಲ್ಲ ನರ್ಸ್​ಗಳಿಗೂ ಹೊಸ ವೇತನ ಅನ್ವಯವಾಗಲಿದೆ. ಇದುವರೆಗೂ 15 ಸಾವಿರ ರೂ. ವೇತನ ಪಡೆಯುತ್ತಿದ್ದ ನರ್ಸ್ ಗಳು ಇನ್ನುಮುಂದೆ 30 ಸಾವಿರ ರೂ. ವೇತನ ಪಡೆಯಲಿದ್ದಾರೆ ಎಂದು ದೃಢಪಡಿಸಿದ್ದಾರೆ.

Also Read  ಬಿಜೆಪಿ ವತಿಯಿಂದ ಮರ್ದಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ...

 

 

error: Content is protected !!
Scroll to Top