ಮಾಸ್ಕ್, ಸಾಮಾಜಿಕ ಅಂತರದಿಂದ ಮಾತ್ರ ಕೊರೋನಾ ನಿಯಂತ್ರಣ ಸಾಧ್ಯ ➤ ಕರ್ನಾಟಕದಲ್ಲಿ ಇನ್ಮುಂದೆ ಲಾಕ್ ಡೌನ್ ಇಲ್ಲ – ಸಿ.ಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಮುಖ್ಯಮಂತ್ರಿ ಬಿ.ಎಸ್​​​ ಯಡಿಯೂರಪ್ಪ ರಾಜ್ಯವನ್ನುದ್ದೇಸಿ ಭಾಷಣ ಮಾಡಿದರು. ಇಂದು ಸಂಜೆ 5 ಗಂಟೆಗೆ ಸರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಆನ್​​ಲೈನ್​​ ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತಾಡಿದ ಯಡಿಯೂರಪ್ಪರ ಭಾಷಣವೂ ಫೇಸ್​​ಬುಕ್​​, ಟ್ವಿಟರ್​​, ಇನ್ಸ್ಟಾಗ್ರಾಮ್, ಯೂಟ್ಯೂಬ್​​​ ಲೈವ್​​ನಲ್ಲಿ ಪ್ರಸಾರವಾಗಿದೆ.

ಪ್ರಸ್ತುತ ದೇಶಾದ್ಯಂತ ಕೋವಿಡ್​-19 ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಕೊರೋನಾ ತಹಬದಿಗೆ ತರುವಲ್ಲಿ ಆರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೀಗ, ಇತ್ತೀಚೆಗೆ ಬೆಂಗಳೂರಿನಲ್ಲಿ ಮಾತ್ರ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಮೊದಲಿನಷ್ಟು ಕೊರೋನಾ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.ಕೊರೊನಾ ವಿರುದ್ದ ಹೋರಾಡಲು ಲಾಕ್ ಡೌನ್ ಪರಿಹಾರವಲ್ಲ, ಹೀಗಾಗಿ ಕರ್ನಾಟಕದ ಯಾವುದೇ ಜಿಲ್ಲೆಯಲ್ಲಿ ಇನ್ಮುಂದೆ ಲಾಕ್ ಡೌನ್ ಇಲ್ಲ ಎಂದು ರಾಜ್ಯವನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದ ಮೂಲಕ ಮಾಡಿದ ಭಾಷಣದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಪರಿಹಾರವೊಂದೇ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮಾತ್ರ. ನಾವು ಕಟ್ಟುನಿಟ್ಟಾಗಿ ಈ ನಿಯಮ ಪಾಲಿಸಿದ್ರೆ ಮಾತ್ರ ಕೊರೋನಾ ನಿಯಂತ್ರಿಸಲು ಸಾಧ್ಯವಿಲ್ಲ ಎಂದರು.

Also Read  ಗಾಂಜಾ ಸಾಗಾಟ- ಆಟೋ ರಿಕ್ಷಾ ಸಹಿತ ಆರೋಪಿ ಅರೆಸ್ಟ್..!

 

error: Content is protected !!
Scroll to Top