(ನ್ಯೂಸ್ ಕಡಬ) newskadaba.com ಪುತ್ತೂರು: ಜು.21., ಮಾರಕ ಕೊರೊನಾ ರೋಗಕ್ಕೆ ಚಿಕ್ಕಮುಡ್ನೂರು ಗ್ರಾಮದ ವೃದ್ಧೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ.
ಅನಾರೋಗ್ಯ ಪೀಡಿತರಾಗಿದ್ದ ಇವರನ್ನು ಪುತ್ತೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡು ಬಂದ ಹಿನ್ನಲೆಯಲ್ಲಿ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಇವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಬಂದಾಗ ಇವರಿಗೆ ಸೋಂಕು ತಗಲಿರುವುದು ಖಚಿತವಾಗಿತ್ತು. ಇವರ ನಿಧನದಿಂದ ತಾಲೂಕಿನಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮೃತರ ಅಂತಿಮ ಸಂಸ್ಕಾರ ಪುತ್ತೂರಿನಲ್ಲಿ ಕೊವೀಡ್ ನಿಯಾಮವಳಿಯಂತೆ ನಡೆಸಲಾಗುತ್ತಿದೆ.