ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭವಾದ ಮದ್ಯದಂಗಡಿ ► ಕಡಬ ತಹಶೀಲ್ದಾರ್ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಸುಪ್ರೀಂ ಕೋರ್ಟ್ ಆದೇಶದನ್ವಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿನ ಬಾರನ್ನು ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿಗೆ ಸ್ಥಳಾಂತರಿಸುವುದನ್ನು ವಿರೋಧಿಸಿ ಸ್ಥಳೀಯರು ಕಡಬ ತಹಶಿಲ್ದಾರ್ ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಘಟನೆ ಸೋಮವಾರದಂದು ನಡೆದಿದೆ.

ಕಲ್ಲುಗುಡ್ಡೆಯಲ್ಲಿ ಸ್ಥಳೀಯರ ವಿರೋಧದ ನಡುವೆಯೂ ಬಾರನ್ನು ತೆರೆಯಲು ಕೆಲವರು ತೆರೆಮರೆಯಲ್ಲಿ ಕಸರತ್ತು ನಡೆಸಿ, ಊರವರು ಕಡಬದಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಕಲ್ಲುಗುಡ್ಡೆಯಲ್ಲಿ ಸೋಮವಾರದಂದು ಬೆಳಿಗ್ಗೆ ಪೊಲೀಸ್ ರಕ್ಷಣೆಯಲ್ಲಿ ಮದ್ಯದಂಗಡಿಯನ್ನು ತೆರೆಯಲಾಯಿತು. ವಿಷಯ ತಿಳಿದ‌ ಪ್ರತಿಭಟನಾಕಾರರು ಅಬಕಾರಿ ಅಧಿಕಾರಿಗಳನ್ನು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಕುಟ್ರುಪ್ಪಾಡಿ ತಾಲೂಕು ಪಂಚಾಯತ್ ಸದಸ್ಯ, ಗಣೇಶ್ ಕೈಕುರೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸಾಂತಪ್ಪ ಗೌಡ, ಮಲೆನಾಡು ಹಿತರಕ್ಷಣಾ ಸಮಿತಿಯ ಸಂಚಾಲಕ ಕಿಶೋರ್ ಶಿರಾಡಿ, ಜಿ.ಪ. ಮಾಜಿ ಸದಸ್ಯ ಮೀರಾ ಸಾಹೇಬ್, ದಲಿತ ಸಂಘದ ಪುತ್ತೂರು ತಾಲೂಕು ಸಂಚಾಲಕಿ ಸುಂದರಿ, ಬಿಜೆಪಿ ಗ್ರಾಮದ ಸಮಿತಿ ಅಧ್ಯಕ್ಷ ಚಂದ್ರಶೇಖರ ಹಳೆನೂಜಿ ಮೊದಲಾದವರು ಉಪಸ್ಥಿತರಿದ್ದರು. ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ದೇವಾಡಿಗ ಹಾಗೂ ಸಂಪ್ಯ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಬ್ದುಲ್ ಖಾದರ್ ಬಂದೋಬಸ್ತ್ ಏರ್ಪಡಿಸಿದ್ದಾರೆ.

error: Content is protected !!
Scroll to Top