ಪಿಕಪ್ ವಾಹಣದಲ್ಲಿ 1 ಕ್ವಿಂಟಾಲ್ ಗೂ ಅಧಿಕ ಗಾಂಜಾ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜು.22:  ಪಿಕಪ್ ವ್ಯಾನ್‌ನಲ್ಲಿ ಬಾಳೆ ಗೊನೆಗಳ ನಡುವೆ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಮಂಜೇಶ್ವ ರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.

 

 

 

ಮಂಜೇಶ್ವರ ಕುಂಜತ್ತೂರು ಪದವಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಪಿಕಪ್ ವ್ಯಾನ್‌ನ್ನು ವೇಗವಾಗಿ ಒಳ ರಸ್ತೆಯಾಗಿ ಚಲಾಯಿಸಿಕೊಂಡು ಹೋಗಿದ್ದು, ಬೆನ್ನಟ್ಟಿದ ಪೊಲೀಸರು ಪಿಕಪ್ ವ್ಯಾನನ್ನು ತಡೆದು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ವ್ಯಾನ್‌ನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ತಪಾಸಣೆ ನಡೆಸಿದಾಗ ಪ್ಯಾಕೆಟ್‌ಗಳಾಗಿ 108 ಕಿಲೋ ಗಾಂಜಾ ಪತ್ತೆಯಾಗಿದೆ. ಪೊಲೀಸರು ಆರೋಪಿಗಳಿಗಾಗಿ ತನಿಖೆ ನಡೆಸುತ್ತಿದ್ದಾರೆ. ವ್ಯಾನ್ ಕರ್ನಾಟಕ ನೋಂದಣಿ ಸಂಖ್ಯೆ ಹೊಂದಿದ್ದು, ವ್ಯಾನ್ ನಂಬ್ರ ನಕಲಿ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಂಡ ಗಾಂಜಾ ದ ಬೆಲೆ ಸುಮಾರು 20 ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಸುಳ್ಯ ಜಾತ್ರೆ-ನಿಷೇಧಾಜ್ಞೆ

 

error: Content is protected !!
Scroll to Top