ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಮಣ್ಯ, ಜು.23:   ಕೊರೊನಾ ಸೋಂಕು ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇದರ ಆರ್ಭಟಕ್ಕೆ ಬ್ರೇಕ್ ಹಾಕೋದಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ ಈ ಬಾರಿ ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

 

 ಕುಕ್ಕೆ ಸುಬ್ರಮಣ್ಯದಲ್ಲಿ ಈ ಬಗ್ಗೆ ಮಾತನಾಡಿದ ಸಚಿವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಕೂಡ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಎಲ್ಲಾ ದೇವಾಲಯಗಳಲ್ಲಿ ಯಾವುದೇ ಸೇವೆ ಆರಂಭವಾಗುವುದಿಲ್ಲ, ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರವಷ್ಟೇ ಅವಕಾಶ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲ, ನಾಗರ ಬನದಲ್ಲಿ ಅರ್ಚಕರಿಗೆ ಮಾತ್ರ ಹಾಲು ಎರೆಯಲು ಅವಕಾಶವಿದೆ. ಅವರವರ ಮನೆಯ ನಾಗಕಟ್ಟೆಯಲ್ಲಿ ಮನೆಯವರು ಮಾತ್ರ ನಾಗರಪಂಚಮಿ ಆಚರಿಸಬಹುದು ಎಂದಿದ್ದಾರೆ. ಈ ಮೂಲಕ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Also Read  ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಯೋಜನೆಯ ಜಾಗೃತಿ ಮೂಡಿಸಲು ಉಪವಿಭಾಗಾಧಿಕಾರಿ ಸೂಚನೆ

 

 

error: Content is protected !!
Scroll to Top