ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ

(ನ್ಯೂಸ್ ಕಡಬ) newskadaba.com ಪುತ್ತೂರು: ಜು.23., ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಅವರ ಮೃತ ದೇಹವನ್ನು ಪುತ್ತೂರು ಠಾಣೆಯಲ್ಲಿ ಇರಿಸಿ ಠಾಣಾ ಸಿಬ್ಬಂದಿಗಳಿಂದ ಗೌರವ ನಮನ ಸಲ್ಲಿಸಲಾಯಿತು.


ಠಾಣೆಯ ಎಸ್.ಐ ಚೆಲುವಯ್ಯ, ಮಹಿಳಾ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕುಸುಮಾಧರ, ನಗರ ಪೊಲೀಸ್ ಠಾಣೆ ಎಸ್.ಐ ಜಂಬೂರಾಜ್ ಮಹಾಜನ್, ಸಂಪ್ಯ ಪೊಲೀಸ್ ಠಾಣೆ ಎಸ್.ಐ ಉದಯ ರವಿ, ಕಡಬ ಪೊಲೀಸ್ ಠಾಣೆ ಎಸ್.ಐ ರುಕ್ಮ ನಾಯ್ಕ್, ನಗರಸಭಾ ಸದಸ್ಯರಾದ ಭಾಮಿ ಅಶೋಕ್ ಶೆಣೈ, ಪಿ.ಜಿ.ಜಗನ್ನಿವಾಸ ರಾವ್, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಸೇರಿದಂತೆ ಠಾಣೆಯ ಸಿಬ್ಬಂದಿಗಳು, ನಾಗರಿಕರು ಸಕಲ ಗೌರವ ಸಮರ್ಪಣೆ ಮಾಡಿ ಸಂತಾಪ ಸೂಚಿಸಿದರು.

Also Read  ಕೊರೊನಾ ವೈರಸ್​ಗೆ ಹೈಕೋರ್ಟ್​ ನ್ಯಾಯಮೂರ್ತಿ ಮೃತ್ಯು


ಬಳಿಕ ಮೃತ ದೇಹವನ್ನು ಬಾಳಿಲ ಉಮೇಶ್ ಅವರ ಮನೆಗೆ ಕೊಂಡೊಯ್ಯಲಾಯಿತು. ಅಲ್ಲಿ ಪೊಲೀಸ್ ಗೌರವದೊಂದಿಗೆ ಅಂತಿಮ ಸಂಸ್ಕಾರ ನಡೆಯುವುದಾಗಿ ತಿಳಿದು ಬಂದಿದೆ.

error: Content is protected !!
Scroll to Top