ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು.

(ನ್ಯೂಸ್ ಕಡಬ) newskadaba.com ಮಂಡ್ಯ, ಜು.23:  ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ. ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.

 

 

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ ತೀವ್ರ ನೊಂದಿದ್ದ ಅವರು ಬುಧವಾರ ತಡರಾತ್ರಿ ಶೌಚಾಲಯದ ಕಿಟಕಿಗೆ ಲುಂಗಿಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

Also Read  ಶಬರಿಮಲೆ ಕಾಣಿಕೆ ಎಣಿಕೆಯಲ್ಲಿ ಲೋಪ ! ➤  ವರದಿಗೆ ಹೈಕೋರ್ಟ್ ಸೂಚನೆ

 

 

error: Content is protected !!
Scroll to Top